ಮೂರನೇ ಹಂತದ ಕೃಷ್ಣ ಮೇಲ್ದಂಡೆ ಯೋಜನೆ ಅಡಿ ಭೂಮಿ ಕಳೆದುಕೊಂಡ ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ.
50,000 ಎಕರೆಗೆ ನೀಡಬೇಕಾಗಿರುವ ಪರಿಹಾರದ ಮೊತ್ತವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ವಿಷಯ ತಿಳಿಸಿದ್ದಾರೆ.
ಪ್ರಸ್ತುತ ಎಕರೆಗೆ 1.5 ಲಕ್ಷ ರೂಪಾಯಿ ಪರಿಹಾರ ಮೊತ್ತ ಇದ್ದು ಮೂರು ಪಟ್ಟು ಅಂದರೆ 8 ಲಕ್ಷದಷ್ಟು ನೀಡಲು ನಿರ್ಧರಿಸಲಾಗಿತ್ತು. ಆದರೆ ರೈತರು ಇನ್ನೂ ಹೆಚ್ಚಿಸಬೇಕೆಂಬ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಮಾನವೀಯ ದೃಷ್ಟಿಯಿಂದ ಇದನ್ನು ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.