alex Certify ಕೆಜಿಎಫ್ ಮೊದಲನೇ ಭಾಗದ ದಾಖಲೆ ಮುರಿಯುವ ಸಮೀಪದಲ್ಲಿ ‘ಕಾಂತಾರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಜಿಎಫ್ ಮೊದಲನೇ ಭಾಗದ ದಾಖಲೆ ಮುರಿಯುವ ಸಮೀಪದಲ್ಲಿ ‘ಕಾಂತಾರ’

ರಿಷಬ್ ಶೆಟ್ಟಿ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಕಾಂತಾರ’ ಚಿತ್ರ ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಭರ್ಜರಿ ಪ್ರದರ್ಶನ ಕಾಣುವ ಮೂಲಕ ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ.

ಕಾಂತಾರ ಸಿನಿಮಾ ಈಗಾಗಲೇ 25 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. 2018ರಲ್ಲಿ ತೆರೆಕಂಡಿದ್ದ ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 1 ಚಿತ್ರ 250 ಕೋಟಿ ರೂ. ಕಲೆಕ್ಷನ್ ಮಾಡುವ ಮೂಲಕ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿತ್ತು.

ಇದೀಗ ಕಾಂತಾರ ಸಿನಿಮಾ ಈಗಾಗಲೇ ಸುಮಾರು 243 ಕೋಟಿ ರೂಪಾಯಿ ಗಳಿಕೆ ಮಾಡಿದ್ದು, ಕೆಜಿಎಫ್ ಮೊದಲನೇ ಭಾಗದ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದೆ.

ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಕಿಶೋರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ. ಕಡಿಮೆ ಬಂಡವಾಳದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ದೇಶದೆಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...