ಚೀನಾ ಸೇರಿದಂತೆ ಇತರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ರಾಜ್ಯ ಸರ್ಕಾರ ಕೂಡಾ ಈ ನಿಟ್ಟಿನಲ್ಲಿ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಕೆಮ್ಮು, ಶೀತ, ಜ್ವರ ಇತರೆ ಸಮಸ್ಯೆಯಿಂದ (ಐಎಲ್ಎ – ಸಾರಿ) ಬಳಲುತ್ತಿರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಕೇವಲ ಶೇಕಡ 20ರಷ್ಟು ಮಂದಿ ಮಾತ್ರ ಬೂಸ್ಟರ್ ಡೋಸ್ ಪಡೆದಿದ್ದು, ಎಲ್ಲರೂ ಇದನ್ನು ಪಡೆಯಬೇಕು ಎಂದು ಮನವಿ ಮಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕವನ್ನು ಪರಿಶೀಲಿಸಿ ಬಳಕೆಗೆ ಸನ್ನದ್ದವಾಗಿಟ್ಟುಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿರುವುದಾಗಿ ತಿಳಿಸಿದರು.