alex Certify ಕೆರೆ ಏರಿಗೆ ಶಾಲಾ ಬಸ್ ಡಿಕ್ಕಿ – 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆ ಏರಿಗೆ ಶಾಲಾ ಬಸ್ ಡಿಕ್ಕಿ – 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ….!

ದಾವಣಗೆರೆ : ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಕೆರೆ ಏರಿಗೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಈ ಘಟನೆ ಜಗಳೂರು ತಾಲೂಕಿನ ಹಾಲೇಹಳ್ಳಿ ಕ್ರಾಸ್ ಬಳಿ ನಡೆದಿದೆ. ಶಾಲೆಯಿಂದ ಮಕ್ಕಳು ಮರಳಿ ಹೋಗುತ್ತಿದ್ದ ಸಮಯದಲ್ಲಿ ಈ ಅವಘಡ ನಡೆದಿದೆ.

ವಾಹನದಲ್ಲಿ ಸುಮಾರು 20ಕ್ಕೂ ಹೆಚ್ಚು ಮಕ್ಕಳು ಇದ್ದರು ಎನ್ನಲಾಗಿದ್ದು, ಎಲ್ಲರೂ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು, ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...