ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಆರೋಪ- ಪ್ರತ್ಯಾರೋಪಗಳು ಮುನ್ನೆಲೆಗೆ ಬರುತ್ತಿವೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರಬೇಕು. ಭಗವಾನ್ ಕೃಷ್ಣ ಪ್ರತಿ ದಿನ ಕನಸಿನಲ್ಲಿ ಬಂದು, ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಿದ್ದಾರೆ ಎಂದು ಅಖಿಲೇಶ್ ಯಾದವ್ ಹೇಳಿದ್ದರು.
ಇದರ ಬೆನ್ನಲ್ಲಿಯೇ ಪ್ರಧಾನಿ ಮೋದಿ, ಸಮಾಜವಾದಿ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಉತ್ತರ ಪ್ರದೇಶದಲ್ಲಿ ಗರೀಬ್ ಕ್ ಸರ್ಕಾರ ಹಾಗೂ ನಕಲಿ ಸರ್ಕಾರಗಳ ಮಧ್ಯೆ ಹೋರಾಟ ನಡೆಯುತ್ತಿದೆ. ಆದರೆ, ಯೋಗಿ ಆದಿತ್ಯನಾಥ್ ರವರು ಅಭಿವೃದ್ಧಿ ಕಾರ್ಯಗಳ ಕನಸು ಕಾಣುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನೂ ಕೆಲವರು ನಿದ್ರೆಯಲ್ಲಿ ಕನಸು ಕಾಣುತ್ತಿದ್ದಾರೆ. ಅಧಿಕಾರಕ್ಕಾಗಿ ಹಲವರು ಮಲಗಿ ಪ್ರತಿ ದಿನ ಕನಸು ಕಾಣುತ್ತಿದ್ದಾರೆ. ಅಂತಹ ವ್ಯಕ್ತಿಗಳಿಂದ ಉತ್ತರ ಪ್ರದೇಶದ ಅಭಿವೃದ್ಧಿ ಅಸಾಧ್ಯ. ಅಂತಹ ವ್ಯಕ್ತಿಗಳು ಅಧಿಕಾರಕ್ಕೆ ಬರುವುದೇ ಇಲ್ಲ. ಜನರು ಅವರನ್ನು ಕನಸು ಕಾಣುವಂತೆಯೇ ಮಾಡುತ್ತಾರೆ ಎಂದು ಹೇಳಿದ್ದಾರೆ.
ಬಿಜೆಪಿ ಅಧಿಕಾರವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಸಾಕಷ್ಟು ಕೆಲಸಗಳಾಗಿವೆ. ಮಹಿಳೆಯರಿಗೆ ಸಾಕಷ್ಟು ವಿಫುಲ ಅವಕಾಶಗಳು ಸಿಕ್ಕಿವೆ. ಯುಪಿ ಅಭಿವೃದ್ಧಿಗಾಗಿ ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.