ವ್ಯಕ್ತಿಯೊಬ್ಬ ಅನಧಿಕೃತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಇದರಿಂದ ಆಕ್ರೋಶಗೊಂಡ ಆತ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.
ಹೊಸದುರ್ಗ ಪಟ್ಟಣದ ಚಾಮರಾಜಪೇಟೆ ನಿವಾಸಿ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ್ದು, ಈತ ಗುತ್ತಿಗೆ ಆಧಾರಿತ ಪೌರ ಕಾರ್ಮಿಕನಾಗಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಆದರೆ ಆರು ತಿಂಗಳಿಂದ ಸತತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಈತನಿಗೆ ನೋಟಿಸ್ ನೀಡಿ ಕೆಲಸದಿಂದ ತೆಗೆದು ಹಾಕಲಾಗಿತ್ತು ಎಂದು ಹೇಳಲಾಗಿದೆ.
ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎರಚಿದ ಯುವಕ…!
ಇದರಿಂದ ಆಕ್ರೋಶಗೊಂಡಿದ್ದ ಆತ ಮಂಗಳವಾರದಂದು ಮದ್ಯ ಸೇವಿಸಿ ಕೈಯಲ್ಲಿ ಪೆಟ್ರೋಲ್ ತುಂಬಿದ ಬಾಟಲಿ ಹಿಡಿದುಕೊಂಡು ಪುರಸಭೆ ಕಚೇರಿಗೆ ಬಂದಿದ್ದಾನೆ. ನನ್ನನ್ನು ಕೆಲಸಕ್ಕೆ ತೆಗೆದುಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಿದ ಆತ ಬಳಿಕ ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಆತನನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.