ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಇದೆ ಮೊದಲ ಬಾರಿಗೆ ಬಿಜೆಪಿ ಆಂತರಿಕ ಮತದಾನ ಮಾಡಿದ್ದು, ಹೊಸ ಪ್ರಯೋಗಕ್ಕೆ ನಾಂದಿ ಹಾಡಿದೆ. ಮಹತ್ವದ ಸಂಗತಿ ಎಂದರೆ ಬಿಜೆಪಿ ಸದಸ್ಯರು ಆಕಾಂಕ್ಷಿಗಳ ಪೈಕಿ ಯಾರ ಹೆಸರನ್ನಾದರೂ ಆಯ್ಕೆ ಮಾಡಲು ಅವಕಾಶ ನೀಡಲಾಗಿತ್ತು.
ಈಗಾಗಲೇ ಈ ಮತುಗಳ ಎಣಿಕೆ ನಡೆದಿದೆ ಎನ್ನಲಾಗಿದ್ದು, ಇಂದು ಚುನಾವಣಾ ಸಮಿತಿ ಹಾಗೂ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಟ್ಟಿಯನ್ನು ಪರಿಶೀಲಿಸಿ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಸಮಿತಿಗೆ ಶಿಫಾರಸ್ಸು ಮಾಡಲಾಗುತ್ತದೆ. ಮೂಲಗಳ ಪ್ರಕಾರ ಕೆಲವೊಂದು ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗಿದ್ದು, ಹೀಗಾಗಿ ಆಕಾಂಕ್ಷಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.
ಏಪ್ರಿಲ್ 8ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದ್ದು, ಅಂದು ಅಭ್ಯರ್ಥಿಗಳನ್ನು ಪಟ್ಟಿಯನ್ನು ಅಂತಿಮಗೊಳಿಸಿ ಬಳಿಕ ಬಿಡುಗಡೆ ಮಾಡಲಾಗುತ್ತದೆ. ಇದರ ಮಧ್ಯೆ ತಮಗೆ ಟಿಕೆಟ್ ಸಿಗದಿದ್ದರೆ ಮುಂದಿನ ರಾಜಕೀಯ ಭವಿಷ್ಯ ಏನು ಎಂಬ ಆತಂಕ ಶಾಸಕರುಗಳನ್ನು ಕಾಡುತ್ತಿದ್ದು, ಅಂತಹ ಸಂದರ್ಭದಲ್ಲಿ ಇತರೆ ಪಕ್ಷಗಳ ಬಾಗಿಲು ಬಡಿಯುವ ಸಾಧ್ಯತೆ ಇದೆ.