alex Certify ‘ಕೇಂದ್ರದಿಂದ ನನ್ನ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್: ಪ್ರಿಯಾಂಕ ಗಾಂಧಿ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೇಂದ್ರದಿಂದ ನನ್ನ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್: ಪ್ರಿಯಾಂಕ ಗಾಂಧಿ ಗಂಭೀರ ಆರೋಪ

ಕೇಂದ್ರ ಸರ್ಕಾರವು ನನ್ನ ಮಕ್ಕಳ ಇನ್​ಸ್ಟಾಗ್ರಾಂ ಖಾತೆಯನ್ನು ಹ್ಯಾಕ್​ ಮಾಡಿದೆ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗಂಭೀರ ಆರೋಪವನ್ನು ಮಾಡಿದ್ದಾರೆ.

ಮಹಿಳಾ ಸಬಲೀಕರಣಕ್ಕೆಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ, ಪ್ರಧಾನಿ ಮೋದಿಯ ಪ್ರಯಾಗ್​ರಾಜ್​ ಭೇಟಿಯ ಕುರಿತು ಮಾತನಾಡುತ್ತಾ ಈ ಹೇಳಿಕೆಯನ್ನು ನೀಡಿದ್ದಾರೆ.

ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್​ ಯಾದವ್​ ಮೊದಲು ಪ್ರಶ್ನೆ ಮಾಡಿದ್ದ ಫೋನ್​ ಕದ್ದಾಲಿಕೆಯ ವಿಚಾರದ ಬಗ್ಗೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ಅಲ್ಲದೇ ಈ ಕೇಂದ್ರ ಸರ್ಕಾರವು ಫೋನ್​ ಕದ್ದಾಲಿಕೆ ಮಾಡೋದು ಹಾಗಿರಲಿ. ನನ್ನ ಮಕ್ಕಳ ಇನ್​ಸ್ಟಾಗ್ರಾಂ ಖಾತೆಯನ್ನೂ ಹ್ಯಾಕ್​ ಮಾಡ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಇಂದು ಪ್ರಧಾನಿ ಮಹಿಳೆಯರ ಎದುರು ತಲೆಬಾಗಿದ್ದಾರೆ. ನಿಮ್ಮ ಶಕ್ತಿಯನ್ನು ಅರಿತುಕೊಳ್ಳಿ ಎಂದು ನಾನು ಮಹಿಳೆಯರಿಗೆ ಹೇಳಿದ್ದೆ. ಇದೇ ಕಾರಣಕ್ಕಾಗಿ ಇಂದು ಸರ್ಕಾರವೇ ಮಹಿಳೆಯರ ಎದುರು ತಲೆಬಾಗಿದೆ. ಈ ಮೊದಲು ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಸರ್ಕಾರ ಏನನ್ನೂ ಮಾಡಿಲ್ಲ. ಆದರೆ ಈಗ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಸರ್ಕಾರವು ಮಹಿಳೆಯರ ಎದುರು ತಲೆ ಬಾಗುತ್ತಿದೆ. ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದೆ ಎಂದು ವ್ಯಂಗ್ಯವಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...