ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಅವರಿಗೆ ಶುಭ ಕೋರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಜವಾಬ್ದಾರಿಯುತ ವಿರೋಧಪಕ್ಷವಾಗಿ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ ಎಂದಿದ್ದಾರೆ.
ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ ಗೊತ್ತಿಲ್ಲ ಬಿ.ಎಸ್.ವೈ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ. ಬರಪರಿಹಾರ, ಜಿ ಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕವನ್ನು ಮಲತಾಯಿ ಧೋರಣೆಯಲ್ಲಿ ಕಂಡಿದೆ. ಇದನ್ನು ಪ್ರಧಾನಿ ಮೋದಿ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಐವರು ಬಲಿ
ಕಳೆದ 2 ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಮುಕ್ತ ಚರ್ಚೆ, ಸಂವಾದಗಳೇ ನಿಂತುಬಿಟ್ಟಿವೆ. ಇದಕ್ಕೆ ನೂತನ ಸಿಎಂ ಮರುಚಾಲನೆ ನೀಡುವಿರೆಂಬ ನಿರೀಕ್ಷೆಯಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ