ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯಡಿ 17 ವರೆ ವರ್ಷದಿಂದ 21 ವರ್ಷದೊಳಗಿನ ಯುವಕರು ಸೇನೆ ಸೇರಲು ಅವಕಾಶ ಪಡೆದುಕೊಳ್ಳಲಿದ್ದಾರೆ.
ಹೀಗೆ ಸೇರ್ಪಡೆಗೊಂಡ ಯುವಕರಿಗೆ ತರಬೇತಿ ಸಹಿತ ನಾಲ್ಕು ವರ್ಷದ ಸೇವಾ ಅವಧಿಗೆ ತರಬೇತಿ ನೀಡಿ ಸೈನ್ಯದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ನಾಲ್ಕು ವರ್ಷಗಳ ಬಳಿಕ ಶೇಕಡ 25 ರಷ್ಟು ಅಗ್ನಿ ವೀರರನ್ನು ಸಶಸ್ತ್ರ ಪಡೆಗೆ ನೇಮಕ ಮಾಡಿಕೊಳ್ಳಲಿದ್ದು, ಉಳಿದವರು ನಿರ್ಗಮಿಸುತ್ತಾರೆ.
Big News: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ‘ಯಲ್ಲೋ’ ಅಲರ್ಟ್ ಘೋಷಣೆ
ಈ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಸಾಮರ್ಥ್ಯ ಕುಂಠಿತಗೊಳ್ಳಲಿದೆ ಎಂದಿದ್ದಾರೆ. ಹೀಗಾಗಿ ಸೇನೆಯ ಘನತೆ ಹಾಗೂ ಶೌರ್ಯದ ಜೊತೆ ರಾಜಿ ಬೇಡ ಎಂದು ಅವರು ಹೇಳಿದ್ದಾರೆ.