ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಶೇಕಡ 4ರಷ್ಟು ತುಟ್ಟಿಭತ್ಯೆ ಹೆಚ್ಚಿಸುವ ಸಾಧ್ಯತೆ ಇದ್ದು, ಈಗಿನ ಶೇಕಡ 38 ರಿಂದ ಶೇಕಡಾ 42ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.
ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಲ್ಲಿ ಇದು ಜನವರಿ 1, 2023 ರಿಂದಲೇ ಪೂರ್ವಾನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ.