ಕಳೆದ ವರ್ಷದ ಆರಂಭದಲ್ಲಿ ಕಾಣಿಸಿಕೊಂಡ ಕೊರೊನಾ ತನ್ನ ಅಟ್ಟಹಾಸ ಮುಂದುವರಿಸಿದೆ. ಮೊದಲನೇ ಅಲೆ ಮುಗಿದ ಬಳಿಕ ಶುರುವಾದ ಎರಡನೇ ಅಲೆ ದೊಡ್ಡಮಟ್ಟದಲ್ಲಿ ಸಾವು ನೋವಿಗೆ ಕಾರಣವಾಗಿದೆ. ಇದೀಗ ಎರಡನೇ ಅಲೆ ಆರ್ಭಟ ತಗ್ಗತೊಡಗಿದ್ದು, ಈ ಹಿನ್ನಲೆಯಲ್ಲಿ ದೇಶದ ಬಹುತೇಕ ರಾಜ್ಯಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದೆ.
ಇದರ ಮಧ್ಯೆ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಮೂರನೇ ಅಲೆ ಕಾಲಿಟ್ಟಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೇರಳದಲ್ಲಿ ಪ್ರತಿನಿತ್ಯ 10 ಸಾವಿರಕ್ಕೂ ಅಧಿಕ ಕೇಸುಗಳು ವರದಿಯಾಗುತ್ತಿದ್ದು, ಮಹಾರಾಷ್ಟ್ರದಲ್ಲೂ ಸಹ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ.
ಬಾಡಿಗೆದಾರರು, ಮನೆ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್
ಕೇರಳದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ ಇದು ನೆರೆ ರಾಜ್ಯವಾದ ಕರ್ನಾಟಕದಲ್ಲೂ ಸಹ ಆತಂಕ ಮೂಡಿಸಿದೆ. ಕರ್ನಾಟಕದಲ್ಲಿ ಸೋಂಕು ಇಳಿಮುಖವಾಗುತ್ತಿರುವುದರಿಂದ ಬಹುತೇಕ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಇದರ ಮಧ್ಯೆ ಕೇರಳದಲ್ಲಿ ಹೆಚ್ಚುತ್ತಿರುವ ಸೋಂಕು ಕರ್ನಾಟಕಕ್ಕೂ ಕಾಲಿಟ್ಟರೆ ಕಷ್ಟಕರ ಎಂಬ ಮಾತುಗಳು ಕೇಳಿಬರುತ್ತಿವೆ.