ತುಮಕೂರು : ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮತ್ತೆ 23 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಮನೆ ಮಾಡುತ್ತಿದೆ.
ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಬಂದ ಎಲ್ಲ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಮೂರು ಕಾಲೇಜಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 23 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.
‘ಹುಲಿಯಂತಿದ್ದ ನಾನು ಇಲಿಯಂತಾಗಿದ್ದೀನಿ’; ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವುದು ಬೇಡ; ಮಾಜಿ ಸಿಎಂ ವಿರುದ್ಧ ವೇದಿಕೆ ಮೇಲೆಯೇ ಗುಡುಗಿದ ಮಾಜಿ ಸಚಿವ
ಜಿಲ್ಲೆಯ ಅರುಣ ನರ್ಸಿಂಗ್ ಕಾಲೇಜು, ಸಿದ್ಧಗಂಗಾ ಕಾಲೇಜು ಹಾಗೂ ವರದರಾಜ ಕಾಲೇಜಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ ಅರುಣ ನರ್ಸಿಂಗ್ ಕಾಲೇಜಿನ ಮೂವರು, ಸಿದ್ಧಗಂಗಾ ಕಾಲೇಜಿನ 8 ಹಾಗೂ ವರದರಾಜ ಕಾಲೇಜಿನ 12 ಜನ ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ಖಚಿತವಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೂಡ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಕೇವಲ 10 ದಿನಗಳಲ್ಲಿಯೇ 109 ಜನರಲ್ಲಿ ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ.