ಪಂಚರಾಜ್ಯಗಳ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಯಕರುಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪಂಜಾಬ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಭಾಷಣ ಮಾಡುವ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಕೇವಲ ಜಾಹೀರಾತಿನಲ್ಲಿ ಮಾತ್ರ ಗೋಚರವಾಗುತ್ತಿದೆ. ಜನಸಾಮಾನ್ಯರು ಸಂಕಷ್ಟದಲ್ಲಿರುವ ವೇಳೆ ಕೇಂದ್ರ ಸರ್ಕಾರ ಜಾಹಿರಾತಿಗಾಗಿ ಬರೋಬ್ಬರಿ ಎರಡು ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.
ದೇಶದಲ್ಲಿ ಆಡಳಿತ ಇಲ್ಲದೆ ಇರುವ ಕಾರಣ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಜೊತೆಗೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಲ್ಲದೆ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಗೆಳೆಯರಿಗೆ ಮಾರಾಟ ಮಾಡಿದ್ದಾರೆ ಎಂದು ಪ್ರಿಯಾಂಕ ಗಾಂಧಿ ಲೇವಡಿ ಮಾಡಿದ್ದಾರೆ.