alex Certify ಕೇಸರಿ ಶಾಲು ಹಾಕಿಕೊಂಡು ಸಿಎಂ ಪರ ರೋಡ್ ಶೋಗೆ ಹೊರಟ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಸರಿ ಶಾಲು ಹಾಕಿಕೊಂಡು ಸಿಎಂ ಪರ ರೋಡ್ ಶೋಗೆ ಹೊರಟ ಕಿಚ್ಚ ಸುದೀಪ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರು ಸೂಚಿಸುವ ಅಭ್ಯರ್ಥಿಗಳ ಪರ ತಾವು ಪ್ರಚಾರ ಕಾರ್ಯ ನಡೆಸುವುದಾಗಿ ಹೇಳಿದ್ದ ಖ್ಯಾತ ನಟ ಕಿಚ್ಚ ಸುದೀಪ್ ಇಂದು ಶಿಗ್ಗಾಂವಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಜೊತೆ ಒಂದೇ ಹೆಲಿಕಾಪ್ಟರ್ ನಲ್ಲಿ ತೆರಳಿದ ಸುದೀಪ್ ಅವರನ್ನು ಕೇಸರಿ ಶಾಲು ಹಾಕಿ ಸ್ವಾಗತಿಸಲಾಗಿದ್ದು, ಈಗ ನಾಮಪತ್ರ ಸಲ್ಲಿಕೆ ವೇಳೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಇರಲಿದ್ದಾರೆ ಎನ್ನಲಾಗಿದೆ.

ಕಿಚ್ಚ ಸುದೀಪ್ ಬರುತ್ತಾರೆ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದು, ನೆಚ್ಚಿನ ನಟನಿಗಾಗಿ ಕಾದು ನಿಂತಿದ್ದಾರೆ. ಎರಡು ಕಿಲೋಮೀಟರ್ ವರೆಗೆ ರೋಡ್ ಶೋ ನಡೆಯಲಿದೆ ಎನ್ನಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...