ಪೊಲೀಸರ ವರ್ತನೆ ವಿರುದ್ಧ ಕೆಂಡಾಮಂಡಲರಾದ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗೆ ಕರೆ ಮಾಡಿ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತಮ್ಮ ನಿವಾಸದ ಕಚೇರಿಯಿಂದ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಗೆ ಕರೆ ಮಾಡಿದ ಸಚಿವ ಆರಗ ಜ್ಞಾನೇಂದ್ರ, ಯೋಗ್ಯತೆ ಇಲ್ಲ ಅಂದಮೇಲೆ ಸಮವಸ್ತ್ರ ಬಿಚ್ಚಿಟ್ಟು ಮನೆ ಕಡೆ ಹೋಗಲಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಪಕ್ಷದ ಕಾರ್ಯಕರ್ತರ ಎದುರಲ್ಲೇ ಪೊಲೀಸ್ ಅಧಿಕಾರಿಗೆ ಕರೆ ಮಾಡಿದ ಸಚಿವ ಆರಗ ಜ್ಞಾನೇಂದ್ರ, ಪೊಲೀಸರಿಗೆ ಸರ್ಕಾರದಿಂದ ಕೈ ತುಂಬಾ ಸಂಬಳ ಕೊಡುತ್ತಿದ್ದೇವೆ. ಆದರೂ ಪೊಲೀಸರು ಎಂಜಲು ಕಾಸನ್ನು ತಿಂದು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲವೆಂದರೆ ಯೂನಿಫಾರ್ಮ್ ಬಿಚ್ಚಿಟ್ಟು ಹೋಗಲಿ ಎಂದು ಕೂಗಾಡಿದ್ದಾರೆ.
ಪ್ರತಿನಿತ್ಯ ಗೋವು ಸಾಗಾಟ ಮಾಡುವವರು ಯಾರೆಂದು ಪೊಲೀಸರಿಗೆ ತಿಳಿದಿದೆ. ಆದರೂ ಲಂಚ ತಿಂದು ನಾಯಿಯಂತೆ ಬಿದ್ದಿರುತ್ತಾರೆ. ಪೊಲೀಸರಿಗೆ ಆತ್ಮಗೌರವ ಬೇಡವಾ..? ಗೃಹ ಸಚಿವನಾಗಿ ನಾನು ಇರಬೇಕಾ ಬೇಡ್ವಾ..? ಎಲ್ಲಾ ಪೊಲೀಸರು ಕೆಟ್ಟು ಹಾಳಾಗಿ ಹೋಗಿದ್ದಾರೆ ಎಂದು ಕಿಡಿ ಕಾರಿದ್ರು.
https://youtu.be/HcUXG_p47hQ