ಕೊತ್ತಂಬರಿ ಸೊಪ್ಪು ರುಚಿಕರ ಪರಿಮಳಯುಕ್ತವಾಗಿದ್ದು ಸಾರು, ಚಟ್ನಿ ಮುಂತಾದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಬೀಜ ಕೂಡ ಸಾಕಷ್ಟು ಅನಾರೋಗ್ಯ ಸಮಸ್ಯೆಗಳಿಗೆ ಉಪಯುಕ್ತ. ಇದರಿಂದ ಸಿಗುವ ಆರೋಗ್ಯ ಉಪಯೋಗಗಳನ್ನು ತಿಳಿಯೋಣ.
* ಸ್ವಲ್ಪ ಕೊತ್ತಂಬರಿ ಬೀಜ, ಜೀರಿಗೆ, ಶುಂಠಿಯನ್ನು ಪುಡಿ ಮಾಡಿ ಹಾಲಿನಲ್ಲಿ ಬೆರೆಸಿ ಬಿಸಿ ಮಾಡಿ ಅದಕ್ಕೆ ಸ್ವಲ್ಪ ಸಕ್ಕರೆಯನ್ನು ಸೇರಿಸಿ ಸೇವಿಸಿದರೆ ಉತ್ತಮ ಆರೋಗ್ಯಕರ ಪಾನೀಯ ವಾಗುತ್ತದೆ.
* ಕೊತ್ತಂಬರಿ ಬೀಜದ ಪುಡಿಯನ್ನು ನೆನೆಸಿ ಚೆನ್ನಾಗಿ ಕಿವುಚಿ ಶೋಧಿಸಿ ತೆಗೆದ ಕಷಾಯಕ್ಕೆ ಹಾಲು, ಸಕ್ಕರೆ ಬೆರೆಸಿ ಸೇವಿಸಿದಲ್ಲಿ ವಾಂತಿ ನಿಲ್ಲುತ್ತದೆ.
* ಕೊತ್ತಂಬರಿ ಬೀಜದ ಕಷಾಯಕ್ಕೆ ಸಕ್ಕರೆ ಬೆರೆಸಿ ಸೇವಿಸಿದಲ್ಲಿ ತಲೆಸುತ್ತು ಕಡಿಮೆಯಾಗುತ್ತದೆ. ಅಜೀರ್ಣವು ನಿವಾರಣೆಯಾಗುತ್ತದೆ.
ಗಮನಿಸಿ…! ‘ಅಸಾನಿ’ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ
* ಕೊತ್ತಂಬರಿ ಬೀಜವನ್ನು ನೀರಲ್ಲಿ ನೆನೆಸಿಟ್ಟು ಮರುದಿನ ಬೆಳಗ್ಗೆ ಅದನ್ನು ಚೆನ್ನಾಗಿ ರುಬ್ಬಿ, ಸೋಸಿ, ಕಲ್ಲುಸಕ್ಕರೆ ಬೆರೆಸಿ ಸೇವಿಸಿದರೆ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
* ಒಂದು ಲೋಟ ಎಳನೀರಿಗೆ ಅರ್ಧ ಚಮಚ ಕೊತ್ತಂಬರಿ ಬೀಜದ ಪುಡಿ, ಸ್ವಲ್ಪ ಬೆಲ್ಲ ಸೇರಿಸಿ ಪ್ರತಿದಿನ ಸೇವಿಸಿದರೆ ಉರಿಮೂತ್ರ ರೋಗ ನಿವಾರಣೆಯಾಗುತ್ತದೆ.
* ಕೊತ್ತಂಬರಿ ಬೀಜ ಹಾಗೂ ಒಣ ಶುಂಠಿಯನ್ನು ಜಜ್ಜಿ ತಯಾರಿಸಿದ ಕಷಾಯಕ್ಕೆ ಜೇನುತುಪ್ಪ ಬೆರೆಸಿ ಸೇವಿಸುವುದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ.
* ಕೊತ್ತಂಬರಿ ಬೀಜದ ಪುಡಿಯನ್ನು ಜೇನುತುಪ್ಪದಲ್ಲಿ ಬೆರೆಸಿ ಬಾಯಲ್ಲಿಟ್ಟುಕೊಂಡು ಚಪ್ಪರಿಸುತ್ತಿದ್ದರೆ, ಬಾಯಿ ಹುಣ್ಣು ನಿವಾರಣೆಯಾಗುತ್ತದೆ.