alex Certify ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಇಲ್ಲಿದೆ ಮಾಹಿತಿ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ರಾಜ್ಯದಲ್ಲೂ ಕೂಡ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕನೇ ಅಲೆ ಕಾಣಿಸಿಕೊಳ್ಳಬಹುದು ಎಂಬ ಭೀತಿ ಮೂಡಿದೆ.

ಈ ಹಿನ್ನೆಲೆಯಲ್ಲಿ ಸೋಮವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ತಜ್ಞರ ಸಭೆ ನಡೆದಿದ್ದು, ಕೊರೊನಾ ನಿಯಂತ್ರಣಕ್ಕೆ ಕೆಲವೊಂದು ನಿಯಮಗಳನ್ನು ಜಾರಿಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಸಾರ್ವಜನಿಕ ಹಾಗೂ ಕೆಲಸದ ಸ್ಥಳ, ಪ್ರಯಾಣದ ವೇಳೆ ಮಾಸ್ಕ್ ಧಾರಣೆ ಕಡ್ಡಾಯವಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ ಎರಡು ಅಡಿ ಅಂತರ ಕಾಯ್ದುಕೊಳ್ಳಬೇಕಾಗಿದ್ದು, ಜೊತೆಗೆ ಸಾರ್ವಜನಿಕವಾಗಿ ಉಗುಳಿದರೆ ದಂಡ ವಿಧಿಸಲು ತೀರ್ಮಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...