ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸಿರುವುದನ್ನು ಜನ ಸಂಪೂರ್ಣವಾಗಿ ಮರೆತಂತೆ ಕಾಣುತ್ತಿದೆ. ಈ ಸಂದರ್ಭದಲ್ಲಿ ಆದ ಸಾವು-ನೋವುಗಳನ್ನು ಜನ ಲೆಕ್ಕಕ್ಕೆ ಇಟ್ಟಂತೆ ಕಾಣುತ್ತಿಲ್ಲ. ಎರಡನೇ ಅಲೆ ಇಳಿಕೆಯಾಗಿರುವುದರ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಸಲಾಗಿದ್ದು, ಇದನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಹಳಷ್ಟು ಮಂದಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಎಗ್ಗಿಲ್ಲದೆ ಅಡ್ಡಾಡುತ್ತಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುವ ವೇಳೆ ಜನ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದರೂ ಸಹ ಇದ್ಯಾವುದನ್ನು ಸಹ ಪಾಲಿಸಲಾಗುತ್ತಿಲ್ಲ. ಕೊರೋನಾ ಭೂಮಂಡಲದಿಂದಲೇ ಸಂಪೂರ್ಣವಾಗಿ ತೊಲಗಿದೆಯೇನೋ ಎಂಬ ರೀತಿಯಲ್ಲಿ ಸಾರ್ವಜನಿಕರು ವರ್ತಿಸುತ್ತಿದ್ದಾರೆ. ಪ್ರವಾಸಿ ಸ್ಥಳಗಳು ತುಂಬಿತುಳುಕುತ್ತಿವೆ.
BIG NEWS: ಪರೀಕ್ಷೆ ಸಂದರ್ಭದಲ್ಲಿ SSLC ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ಇದೆಲ್ಲವನ್ನು ಅವಲೋಕಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕರ ನಿರ್ಲಕ್ಷಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಹ ಜನರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಲಾಕ್ ಡೌನ್ ಸಡಿಲಿಕೆ ಮಾಡಿರುವುದು ಜನರ ದೈನಂದಿನ ಜೀವನಕ್ಕೆ ಅಡಚಣೆಯಾಗಬಾರದು ಎಂಬ ಕಾರಣಕ್ಕೆ ಮಾತ್ರ ಎಂದು ತಿಳಿಸಿದ್ದಾರೆ. ಒಂದೊಮ್ಮೆ ಜನರ ವರ್ತನೆ ಇದೇ ರೀತಿ ಮುಂದುವರೆದು ಸೋಂಕಿನ ಪ್ರಮಾಣ ತೀವ್ರವಾಗಿ ಹೆಚ್ಚಳವಾದರೆ ಮತ್ತೊಮ್ಮೆ ಲಾಕ್ಡೌನ್ ಹೇರುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.