ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,47,254 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.94ಕ್ಕೆ ಏರಿಕೆಯಾಗಿದೆ
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, 24 ಗಂಟೆಯಲ್ಲಿ 703 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 488396 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2018825 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 251777 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 36058806 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 70,49,779 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,60,43,70,484 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 19,35,912 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.