alex Certify BIG BREAKING: ಕೊರೊನಾ ಮಹಾಸ್ಫೋಟ; ಒಂದೇ ದಿನದಲ್ಲಿ 3,17,532 ಜನರಲ್ಲಿ ಸೋಂಕು ಪತ್ತೆ; 490ಕ್ಕೂ ಹೆಚ್ಚು ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಮಹಾಸ್ಫೋಟ; ಒಂದೇ ದಿನದಲ್ಲಿ 3,17,532 ಜನರಲ್ಲಿ ಸೋಂಕು ಪತ್ತೆ; 490ಕ್ಕೂ ಹೆಚ್ಚು ಜನ ಬಲಿ

 ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 3,17,532 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.16.41ಕ್ಕೆ ಏರಿಕೆಯಾಗಿದೆ

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, 24 ಗಂಟೆಯಲ್ಲಿ 491 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 487693 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1924051 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 223990 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35807029 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 73,38,592 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,59,67,55,879 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 19,35,180 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...