ದೇಶದಲ್ಲಿ ಕೊರೊನಾ ಸಂಪೂರ್ಣವಾಗಿ ಇಳಿಮುಖವಾಗಿತ್ತಾದರೂ ಕಳೆದ ಕೆಲವು ದಿನಗಳಿಂದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ನಾಲ್ಕನೇ ಅಲೆ ಭೀತಿಯಿಂದ ಕೆಲವೊಂದು ನಿರ್ಬಂಧಗಳನ್ನು ಹೇರಲು ಸರ್ಕಾರಗಳು ಸಿದ್ಧತೆ ನಡೆಸಿದ್ದವು.
ಇದರ ಮಧ್ಯೆ ತಜ್ಞರು, ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದವರಿಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ. ದೇಶದಲ್ಲಿ ಕೋವಿಡ್ ಅಂತ್ಯವಾಗುವತ್ತ ಸಾಗಿದ್ದು, ಇಂತಹ ಸಂದರ್ಭಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಸಾಮಾನ್ಯ ಎಂಬುದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ತಜ್ಞರ ಅಭಿಪ್ರಾಯವಾಗಿದೆ.
ಸದ್ಯ ಕೊರೊನಾ ಸೋಂಕಿನ ಪ್ರಕರಣಗಳು ಕೆಲವೊಂದು ಜಿಲ್ಲೆಗಳಿಗಷ್ಟೇ ಸೀಮಿತವಾಗಿದ್ದು, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿರುವುದು ಇದಕ್ಕೆ ಕಾರಣವಾಗಿರಬಹುದು. ಹೀಗಾಗಿ ಈ ಹಿಂದಿನಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಸೋಂಕು ಹೆಚ್ಚಳವಾಗುತ್ತಿದ್ದರು ಸಹ ಸಾವಿನ ಸಂಖ್ಯೆ ಹಾಗೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇರುವುದು ಗಮನಾರ್ಹ ಸಂಗತಿ.