alex Certify ಕೊರೊನಾ 3ನೇ ಅಲೆ ಭೀತಿ…! ಅಗತ್ಯ ಬಿದ್ದರೆ ಶಾಲಾ-ಕಾಲೇಜು ಬಂದ್ ಮಾಡಲು ಮುಂದಾಗಿದೆ ಈ ರಾಜ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ 3ನೇ ಅಲೆ ಭೀತಿ…! ಅಗತ್ಯ ಬಿದ್ದರೆ ಶಾಲಾ-ಕಾಲೇಜು ಬಂದ್ ಮಾಡಲು ಮುಂದಾಗಿದೆ ಈ ರಾಜ್ಯ

ಕೋಲ್ಕತ್ತಾ: ಭಾರತದಲ್ಲಿ ಹೊಸ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಶಾಲೆ-ಕಾಲೇಜುಗಳನ್ನು ಬಂದ್ ಮಾಡಲು ಸಿಎಂ ಮಮತಾ ಬ್ಯಾನರ್ಜಿ ಚಿಂತನೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಡಿಸೆಂಬರ್ 29) ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಆಡಳಿತಾತ್ಮಕ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಂಟೈನ್‌ಮೆಂಟ್ ವಲಯಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಒಂದು ವೇಳೆ ಪ್ರಕರಣ ಹೆಚ್ಚಾದ್ರೆ, ರಾಜ್ಯ ಸರ್ಕಾರವು ಶಾಲಾ-ಕಾಲೇಜುಗಳನ್ನು ಸ್ವಲ್ಪ ಸಮಯದವರೆಗೆ ಬಂದ್ ಮಾಡುವ ಬಗ್ಗೆಯೂ ಯೋಚಿಸಲಿದೆ. ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಜೊತೆಗೆ ಓಮಿಕ್ರಾನ್ ಪ್ರಕರಣಗಳು ಸಹ ಇವೆ. ಆದ್ದರಿಂದ, ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಿ, ಸ್ವಲ್ಪ ಸಮಯದವರೆಗೆ ಶಾಲಾ-ಕಾಲೇಜುಗಳನ್ನು ಕ್ಲೋಸ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇದುವರೆಗೆ 11 ಓಮಿಕ್ರಾನ್-ವೇರಿಯಂಟ್ ಕೊರೋನ ವೈರಸ್ ಪ್ರಕರಣಗಳು ವರದಿಯಾಗಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...