ಬೆಂಗಳೂರು: ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ 11ರವರೆಗೂ ನೈಟ್ ಕರ್ಫ್ಯೂ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಅ.11 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
ಗುಂಡೇಟು ತಗುಲಿ ಗಾಯಗೊಂಡಿದ್ದರೂ ಬೆಕ್ಕು ತರಚಿದೆ ಎಂದುಕೊಂಡಿದ್ದ ಭೂಪ…!
ರಾಜ್ಯ ಸರ್ಕಾರ ಸೆ.27 ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು. ಆದರೀಗ ನೈಟ್ ಕರ್ಫ್ಯೂ ಆದೇಶದಲ್ಲಿ ಬದಲಾವಣೆ ಮಾಡಲಾಗಿದ್ದು, ಅ.11ರವರೆಗೆ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ.