alex Certify ಕೊರೊನಾ 4 ನೇ ಅಲೆ ಆತಂಕದಲ್ಲಿದ್ದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ 4 ನೇ ಅಲೆ ಆತಂಕದಲ್ಲಿದ್ದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

Appearance of variants of concern in King County reinforce need to stay  vigilant – PUBLIC HEALTH INSIDERದೇಶದಲ್ಲಿ ಇಳಿಮುಖವಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗತೊಡಗಿದೆ. ಹೀಗಾಗಿ ಕೊರೊನಾ ನಾಲ್ಕನೆಯ ಅಲೆ ಆರಂಭವಾಗಿದೆಯಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದ್ದು, ಆತಂಕಕ್ಕೆ ಕಾರಣವಾಗಿತ್ತು.

ಈ ಆತಂಕಕ್ಕೆ ಪೂರಕವೆಂಬಂತೆ ಸರ್ಕಾರಗಳು ಕೂಡ ಕೊರೊನಾ ಮಾರ್ಗಸೂಚಿಯನ್ನು ಹೊರಡಿಸಿದ್ದು, ಮಾಸ್ಕ್ ಧಾರಣೆ ಕಡ್ಡಾಯ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂಬ ಅಂಶವನ್ನು ಒತ್ತಿ ಹೇಳಿದ್ದವು.

ಇದರ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಹತ್ವದ ಮಾಹಿತಿಯನ್ನು ನೀಡಿದ್ದು, ಭಾರತದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಬರುವ ಸಾಧ್ಯತೆಯೂ ಕಡಿಮೆ ಎಂದು ತಿಳಿಸಿದೆ. ಈಗ ಸೋಂಕು ಸ್ಥಳೀಯ ಮಟ್ಟದಲ್ಲಿ ಇದೆ ಎಂದು ಸ್ಪಷ್ಟಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...