ಹೈದರಾಬಾದ್: ಕೊರೋನಾ ಲಸಿಕೆ ಪಡೆದ ಮತ್ತೊಬ್ಬ ಆರೋಗ್ಯ ಕಾರ್ಯಕರ್ತರೊಬ್ಬರು ಮೃತತಟ್ಟಿದ್ದು, ಇದರೊಂದಿಗೆ ಲಸಿಕೆ ಪಡೆದು ಮೃತಪಟ್ಟ ಆರೋಗ್ಯ ಕಾರ್ಯಕರ್ತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ತೆಲಂಗಾಣದ ಮಂಚೇರಿಯಲ್ ಜಿಲ್ಲೆ ಕಾಸಿಪೇಟೆಯಲ್ಲಿ 55 ವರ್ಷದ ಆರೋಗ್ಯ ಕಾರ್ಯಕರ್ತೆ ಜನವರಿ 19 ರಂದು ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ನಂತರದಲ್ಲಿ ಅವರಿಗೆ ಉಸಿರಾಟ ಸಮಸ್ಯೆ ಸೇರಿ ಆರೋಗ್ಯ ತೊಂದರೆಯಾಗಿದ್ದು, ಜನವರಿ 29 ರಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ನಿಜಾಮ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಜನವರಿ 30 ರಂದು ಮೃತಪಟ್ಟಿದ್ದಾರೆ. ಅವರ ಸಾವಿಗೆ ಲಸಿಕೆ ಕಾರಣವಲ್ಲ. ಬೇರೆ ಆರೋಗ್ಯ ಸಮಸ್ಯೆ ಕಾರಣವೆಂದು ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ ನೀಡಲಾಗಿದೆ.