alex Certify ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕಾರ; ಪತ್ರಕರ್ತ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕಾರ; ಪತ್ರಕರ್ತ ಅರೆಸ್ಟ್

ಕೊಲೆ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ಪತ್ರಕರ್ತ ಮೆಹಬೂಬ್ ಮುನವಳ್ಳಿಯನ್ನು ದಾವಣಗೆರೆ ಜಿಲ್ಲೆ, ನ್ಯಾಮತಿ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಧಾರವಾಡದ ಮೆಹಬೂಬ್ ಮುನವಳ್ಳಿ ಖಾಸಗಿ ಸುದ್ದಿ ವಾಹಿನಿಯ ವರದಿಗಾರನಾಗಿದ್ದು, ಈತ ಹೊನ್ನಾಳಿ ತಾಲೂಕಿನ ಚೀಲೂರು ಬಳಿ ನಡೆದಿದ್ದ ಕೊಲೆ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ್ದ ಎನ್ನಲಾಗಿದೆ.

ಚೀಲೂರು ಬಳಿ ಆಂಜನೇಯ ಎಂಬಾತನನ್ನು ಹತ್ಯೆ ಮಾಡಿದ್ದ ಸುನಿಲ್, ವೆಂಕಟೇಶ್, ಅಭಿಲಾಶ್, ಪವನ್ ಮತ್ತಿತರ ಆರೋಪಿಗಳು ಮಧು ಎಂಬಾತನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇವರುಗಳಿಗೆ ನೆರವಾಗಿದ್ದ ಆರೋಪ ಮೆಹಬೂಬ್ ಮುನವಳ್ಳಿ ಮೇಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...