ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಿದ್ದು, ಟಿಎಂಸಿ ಭರ್ಜರಿ ಗೆಲುವಿನತ್ತ ಹೆಜ್ಜೆ ಹಾಕಿದೆ. 144 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಟಿಎಂಸಿ ಬರೋಬ್ಬರಿ 133 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ.
ಬಿಜೆಪಿ 3, ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಹಾಗೂ ಎಡರಂಗ ಪಕ್ಷಗಳು ನಾಲ್ಕರಲ್ಲಿ ಮುನ್ನಡೆ ಸಾಧಿಸಿವೆ.
ಈಗಾಗಲೇ ಟಿಎಂಸಿ ಪಕ್ಷವು 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಕ್ಷೇತ್ರಗಳಲ್ಲಿ ಜಯ ಸಾಧಿಸಿವೆ.
ಡೆಲ್ಟಾಗಿಂತ ವ್ಯಾಪಕವಾಗಿ ಹರಡುತ್ತಿದೆ ಒಮಿಕ್ರಾನ್; ಈ ಕುರಿತು ಸಾಕ್ಷ್ಯ ಲಭ್ಯ ಎಂದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ
ಕೊಲ್ಕತ್ತಾದಲ್ಲಿ 40.5 ಲಕ್ಷದಷ್ಟು ಮತದಾರರಿದ್ದು, ಶೇ.63ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದರು. ಇಲ್ಲಿಯವರೆಗಿನ ಮತ ಎಣಿಕೆ ಅಂಕಿ – ಅಂಶ ಗಮನಿಸಿದರೆ ಟಿಎಂಸಿ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.
ಭಾನುವಾರ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೋರೇಷನ್ ಗೆ ಚುನಾವಣೆ ನಡೆದಿತ್ತು. ಕೊರೊನಾ ನಿಯಮಗಳಂತೆ ಭಾರೀ ಬಿಗಿ ಭದ್ರತೆಯಲ್ಲಿ ಚುನಾವಣೆ ಜರುಗಿತ್ತು.