ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ‘ಕೋಟಿಕಂಠ ಗಾಯನ’ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದೆ.
50 ದೇಶಗಳು, 27 ರಾಜ್ಯಗಳು, 30,000ಕ್ಕೂ ಅಧಿಕ ಸಂಘ ಸಂಸ್ಥೆಗಳು, 10,000ಕ್ಕೂ ಅಧಿಕ ಸ್ಥಳಗಳಿಂದ ಒಟ್ಟು 1.35 ಕೋಟಿಗೂ ಅಧಿಕ ಕನ್ನಡಿಗರು ಏಕಕಾಲಕ್ಕೆ ಕನ್ನಡ ಗೀತೆಗಳು ಹಾಡುವ ಮೂಲಕ ತಮ್ಮ ಕನ್ನಡ ಪ್ರೇಮವನ್ನು ಮೆರೆದಿದ್ದಾರೆ.
ಈ ಅಭಿಯಾನದ ಅಭೂತಪೂರ್ವ ಯಶಸ್ಸಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಪುಟ ಸಹೋದ್ಯೋಗಿಗಳು, ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ರಾಜ್ಯದ ಸಮಸ್ತ ಕನ್ನಡಿಗರಿಗೆ ಹೃದಯಪೂರ್ವಕ ಧನ್ಯವಾದ ಅರ್ಪಿಸಿದೆ.