alex Certify ಕೋರ್ಟ್ ಆದೇಶ ಪಾಲಿಸಬೇಕು ಎನ್ನುವವರನ್ನು ಉಗ್ರರು ಎಂದರೆ ಹೇಗೆ……? ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ಸಿ.ಟಿ.ರವಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋರ್ಟ್ ಆದೇಶ ಪಾಲಿಸಬೇಕು ಎನ್ನುವವರನ್ನು ಉಗ್ರರು ಎಂದರೆ ಹೇಗೆ……? ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಆಜಾನ್ ವಿರುದ್ಧ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು ಎಂಬ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೋರ್ಟ್ ಆದೇಶ ಪಾಲನೆ ಮಾಡಬೇಕು ಎಂದು ಹೇಳುವವರನ್ನು ಉಗ್ರರು ಎಂದು ಕರೆದರೆ ಹೇಗೆ? ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಧ್ವನಿವರ್ಧಕಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವಿದೆ. ಹೀಗಾಗಿ ಕೋರ್ಟ್ ಆದೇಶ ಪಾಲಿಸಬೇಕು ಎಂದು ಹಿಂದೂಪರ ಸಂಘಟನೆಗಳು ಹೇಳುತ್ತಿವೆ. ಅವರನ್ನು ಭಯೋತ್ಪಾದಕರು ಎಂದು ಕರೆದರೆ ಹೇಗೆ? ಕಾಂಗ್ರೆಸ್ ನಾಯಕರು ಹತಾಶರಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನ್ಯಾಯಾಲಯದ ಆದೇಶ ಒಬ್ಬರಿಗೊಂದು ಒಬ್ಬರಿಗೊಂದು ಮಾಡಲು ಆಗಲ್ಲ. ಕೋರ್ಟ್ ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಬೇಕಾದ್ದು ಸರ್ಕಾರದ ಕರ್ತವ್ಯ. ಕೋರ್ಟ್ ಆದೇಶ ಅನುಷ್ಠಾನ ಆಗದಿದ್ದಾಗ ಕ್ರಿಯೆ ಪ್ರತಿಕ್ರಿಯೆ ಆರಂಭವಾಗುತ್ತೆ. ಆದೇಶ ಪಾಲಿಸುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...