ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ವಿಚಾರಣೆ ಎದುರಿಸುತ್ತಿರುವ ಇಬ್ಬರು, ನ್ಯಾಯಾಲಯದ ಖರ್ಚು ನಿಭಾಯಿಸಲು ಬರೋಬ್ಬರಿ 25 ಬೈಕುಗಳನ್ನು ಕಳವು ಮಾಡಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ಈ ಇಬ್ಬರು ಆರೋಪಿಗಳು ಹೊಸಪೇಟೆ, ಬಳ್ಳಾರಿ, ಕಂಪ್ಲಿ, ಕಮಲಾಪುರ, ಕೊಪ್ಪಳ ಹಾಗೂ ಗಂಗಾವತಿಯಲ್ಲಿ ಜನನಿಬಿಡ ರಸ್ತೆಯಲ್ಲಿ ನಿಲ್ಲಿಸುತ್ತಿದ್ದ ಬೈಕುಗಳನ್ನು ನಕಲಿ ಕೀ ಬಳಸಿ ಕಳವು ಮಾಡುತ್ತಿದ್ದರು.
ಬಳಿಕ ಅವುಗಳನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದು, ಇದೀಗ ಪೊಲೀಸರು ಬೈಕ್ ಕಳವು ಮಾಡಿದ ಆರೋಪಿಗಳು ಹಾಗೂ ಅವರಿಂದ ಖರೀದಿಸಿರುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.