ರಾಜ್ಯ ಮತ್ತು ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕು ನಿರಂತರವಾಗಿ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದೆರಡು ದಿನಗಳಿಂದ ಪ್ರತಿನಿತ್ಯ 3 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲೂ 280 ಕ್ಕೂ ಅಧಿಕ ಪ್ರಕರಣ ವರದಿಯಾಗಿದೆ.
ಹೀಗಾಗಿ ಮತ್ತೊಂದು ಅಲೆ ಎದುರಾಗಬಹುದಾ ಎಂಬ ಆತಂಕ ಸಾರ್ವಜನಿಕರನ್ನು ಕಾಡುತ್ತಿದ್ದು, ಇದರ ಮಧ್ಯೆ ತಜ್ಞರು, ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಕೋವಿಡ್ ಏರಿಕೆಯಾಗುತ್ತಿದ್ದರೂ ಸಹ ಹೊಸ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇಲ್ಲ ಎಂದು ತಿಳಿಸಿದ್ದು, ಜನರಲ್ಲಿ ನೆಮ್ಮದಿ ಮೂಡುವಂತೆ ಮಾಡಿದೆ.
ಆದರೆ ಸೋಂಕು ವ್ಯಾಪಿಸದಂತೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದ್ದು, ತಮಿಳುನಾಡಿನ ಆಸ್ಪತ್ರೆಗಳಲ್ಲಿ ಈಗಾಗಲೇ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಅಲ್ಲದೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಮಾಸ್ಕ್ ಕಡ್ಡಾಯಗೊಳಿಸಲು ಚಿಂತನೆ ನಡೆದಿದ್ದು, ಅದೇ ರೀತಿ ರಾಜ್ಯದಲ್ಲೂ ಕೂಡ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.