ಧಾರ್ಮಿಕ ಮುಖಂಡ ಹಾಗೂ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಜನ್ಮದಿನೋತ್ಸವ ಆಚರಿಸಿದ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಾಕ್ಷಿ ಮಹಾರಾಜ್ ಸೇರಿದಂತೆ ಹತ್ತಾರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಋಷಿಕೇಶದ ರೈಲ್ವೆ ರಸ್ತೆಯಲ್ಲಿರುವ ಭಗವಾನ್ ಭವನ ಆಶ್ರಮದಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಉನ್ನಾವೋ ಸಂಸದ ಸಾಕ್ಷಿ ಮಹಾರಾಜ್ ಸೇರಿದಂತೆ 40 ರಿಂದ 50 ಜನರ ವಿರುದ್ಧ ಸೆಕ್ಷನ್ 144 ಹಾಗೂ ಕೋವಿಡ್ 19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಋಷಿಕೇಶದ ರೈಲ್ವೆ ರಸ್ತೆಯಲ್ಲಿರುವ ಭಗವಾನ್ ಭವನ ಆಶ್ರಮದಲ್ಲಿ ತಮ್ಮ ಜನ್ಮದಿನದಂದು ಕಾರ್ಯಕ್ರಮವನ್ನು ಆಯೋಜಿಸಿದ್ದ ಉನ್ನಾವೋದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಸೇರಿದಂತೆ 40 ರಿಂದ 50 ಮಂದಿಯ ವಿರುದ್ಧ ಸೆಕ್ಷನ್ 144 ಹಾಗೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಪಾಂಡೆ ಹೇಳಿದರು. ಅಪರ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪೊಲೀಸ್ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.