alex Certify ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಬಿಜೆಪಿ ಸಂಸದರಿಗೆ ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಬಿಜೆಪಿ ಸಂಸದರಿಗೆ ಸಂಕಷ್ಟ

ಧಾರ್ಮಿಕ ಮುಖಂಡ ಹಾಗೂ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್​​ ಜನ್ಮದಿನೋತ್ಸವ ಆಚರಿಸಿದ ಹಿನ್ನೆಲೆಯಲ್ಲಿ ಕೋವಿಡ್​ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಾಕ್ಷಿ ಮಹಾರಾಜ್​ ಸೇರಿದಂತೆ ಹತ್ತಾರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಋಷಿಕೇಶದ ರೈಲ್ವೆ ರಸ್ತೆಯಲ್ಲಿರುವ ಭಗವಾನ್ ಭವನ ಆಶ್ರಮದಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಉನ್ನಾವೋ ಸಂಸದ ಸಾಕ್ಷಿ ಮಹಾರಾಜ್​ ಸೇರಿದಂತೆ 40 ರಿಂದ 50 ಜನರ ವಿರುದ್ಧ ಸೆಕ್ಷನ್​ 144 ಹಾಗೂ ಕೋವಿಡ್ 19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಋಷಿಕೇಶದ ರೈಲ್ವೆ ರಸ್ತೆಯಲ್ಲಿರುವ ಭಗವಾನ್​ ಭವನ ಆಶ್ರಮದಲ್ಲಿ ತಮ್ಮ ಜನ್ಮದಿನದಂದು ಕಾರ್ಯಕ್ರಮವನ್ನು ಆಯೋಜಿಸಿದ್ದ ಉನ್ನಾವೋದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಸೇರಿದಂತೆ 40 ರಿಂದ 50 ಮಂದಿಯ ವಿರುದ್ಧ ಸೆಕ್ಷನ್​ 144 ಹಾಗೂ ಕೋವಿಡ್​ ಮಾರ್ಗಸೂಚಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಪಾಂಡೆ ಹೇಳಿದರು. ಅಪರ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪೊಲೀಸ್ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...