ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರನೇ ಬಾರಿಗೆ ಕೋವಿಡ್ ಸೋಂಕಿಗೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ಶನಿವಾರದ ತಮ್ಮ ದೆಹಲಿ ಪ್ರವಾಸವನ್ನು ರದ್ದುಪಡಿಸಿದ ಮುಖ್ಯಮಂತ್ರಿಗಳು ಮನೆಯಲ್ಲೇ ಐಸೋಲೇಟ್ ಆಗಿದ್ದಾರೆ.
ತಾವು ಕೋವಿಡ್ ಸೋಂಕಿಗೊಳಗಾಗಿರುವುದರ ಕುರಿತು ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದರು.
ಇದರ ಮಧ್ಯೆ ಅವರು ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರ ಜೊತೆ ಮನೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದು, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದ್ದಾರೆ.