ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸೋಮವಾರದ ವೇಳೆಗೆ 134 ದಿನಗಳ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಕರ್ನಾಟಕದಲ್ಲೂ ಸಹ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದ್ದು, ಪರೀಕ್ಷೆ, ರೋಗ ಪತ್ತೆ, ಚಿಕಿತ್ಸೆ, ಲಸಿಕೆ ಹಾಗೂ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಮುಂದುವರಿಸಬೇಕು ಎಂದು ತಿಳಿಸಲಾಗಿದ್ದು, ಈ ಮೊದಲಿನಂತೆ ಸಾರ್ವಜನಿಕರು ಎಲ್ಲ ಸುರಕ್ಷತಾ ವಿಧಾನಗಳನ್ನು ಪಾಲಿಸುವುದು ಸೂಕ್ತ ಎಂದು ಹೇಳಿದೆ.
ಅಲ್ಲದೆ ಉಸಿರಾಟದ ಸಮಸ್ಯೆ ಇರುವವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು, ಸೋಂಕಿನ ಲಕ್ಷಣ ಕಂಡು ಬಂದರೆ ಕೂಡಲೇ ಪರೀಕ್ಷೆಗೆ ಒಳಗಾಗಬೇಕು ಎಂದು ತಿಳಿಸಲಾಗಿದ್ದು, ಅಲ್ಲದೆ ಇನ್ಫ್ಲುಯೆಂಜಾ ಸೇರಿದಂತೆ ಇತರೆ ಸೋಂಕಿತರನ್ನು ಸಹ ಪರೀಕ್ಷೆಗೆ ಒಳಪಡಿಸುವುದು ಸೂಕ್ತ ಎಂದು ಸಲಹೆ ನೀಡಿದೆ.