
ಎಲ್ಲರಿಗೂ ಉಚಿತ ಲಸಿಕೆಗಳು. ಭಾರತದಲ್ಲಿ ಅರ್ಹ ವಯಸ್ಕ ಜನಸಂಖ್ಯೆಯ ಶೇಕಡಾ 80ರಷ್ಟು ಜನರು ಕೋವಿಡ್ 19 ಲಸಿಕೆಯ ಎರಡೂ ಡೋಸ್ಗಳನ್ನು ಸ್ವೀಕರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಸಬ್ ಕಾ ಪ್ರಯಾಸ್ ಎಂಬ ಧ್ಯೇಯವಾಕ್ಯದೊಂದಿಗೆ ದೇಶವು ಕೋವಿಡ್ 19 ಲಸಿಕೆಯ 100 ಪ್ರತಿಶತ ಸಾಧನೆಯ ಕಡೆಗೆ ವೇಗವಾಗಿ ಚಲಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಓಮಿಕ್ರಾನ್ ರೂಪಾಂತರದಿಂದಾಗಿ ದೇಶದಲ್ಲಿ ಉಂಟಾಗಿದ್ದ ಕೋವಿಡ್ ಮೂರನೇ ಅಲೆಯು ಇದೀಗ ಕ್ಷೀಣಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ನಿಜಕ್ಕೂ ದೊಡ್ಡ ಮುನ್ನಡೆಯೇ ಆಗಿದೆ.
ಕೋವಿಡ್ 19 ನಿರ್ಬಂಧಗಳನ್ನು ತೆಗೆದು ಹಾಕುವಂತೆ ಈಗಾಗಲೇ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ ಎನ್ನಲಾಗಿದೆ.