ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಗುಣಮುಖರಾಗುತ್ತಿರುವರ ಸಂಖ್ಯೆ ಹೆಚ್ಚಿದೆ. ಇದೀಗ ಕೋವಿಡ್ ಎರಡನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ಲಕ್ಷಕ್ಕಿಂತಲೂ ಕಡಿಮೆ ಜನರಲ್ಲಿ ಸೋಂಕು ಪತ್ತೆಯಾಗಿದೆ.
ಕಳೆದ 68 ದಿನಗಳಲ್ಲಿ ಮೊದಲ ಬಾರಿಗೆ 24 ಗಂಟೆಯಲ್ಲಿ 86,498 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಎರಡನೇ ಅಲೆ ಆರಂಭದ ದಿನಗಳಲ್ಲಿ ಪ್ರತಿದಿನ 3 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗಿ ಜನಜೀವನವನ್ನೇ ತಲ್ಲಣಗೊಳಿಸಿದ್ದ ಮಹಾಮಾರಿ ಅಟ್ಟಹಾಸಕ್ಕೆ ಕಡಿವಾಣ ಬಿದ್ದಿದ್ದು, ಇದೀಗ 24 ಗಂಟೆಯಲ್ಲಿ 1 ಲಕ್ಷಕ್ಕೂ ಕಡಿಮೆ ಕೇಸ್ ಪತ್ತೆಯಾಗಿರುವುದು ನಿಟ್ಟುಸಿರು ಬಿಡುವಂತಾಗಿದೆ.
ಲಸಿಕೆ ಕುರಿತ ಮುಖ್ಯ ಮಾಹಿತಿ: ಕೊವ್ಯಾಕ್ಸಿನ್ ಗಿಂತ ಕೋವಿಶೀಲ್ಡ್ ಪಡೆದವರಿಗೆ ರೋಗ ನಿಗ್ರಹ ಶಕ್ತಿ ಜಾಸ್ತಿ
ಇನ್ನು ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆಯಾಗಿದ್ದು, 49 ದಿನಗಳ ಬಳಿಕ 2000 ದಾಖಲಾಗಿದೆ. ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,82,282 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 2,73,41,462 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮನಸಿಗೆ ಮುದ ನೀಡುತ್ತೆ ಪಾಕ್ ವೈದ್ಯೆಯ ಕಂಠಸಿರಿ..!
ದೇಶದಲ್ಲಿ 23,61,98,726 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆ ಲಾಕ್ ಡೌನ್ ಹಾಗೂ ವ್ಯಾಕ್ಸಿನ್ ಮೂಲಕ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವುದು ದೇಶದ ಜನರಲ್ಲಿ ನಿಟ್ಟುಸಿರು ಬಿಡುವಂತಾಗಿದೆ.