ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯದ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ವಿಕ್ರಂ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ.
ನಟ ಪುನೀತ್ ಹೃದಯಾಘಾತಕ್ಕೊಳಗಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ದೌಡಾಯಿಸಿದ್ದಾರೆ.
ಪುನೀತ್ ಆರೋಗ್ಯ ಗಂಭೀರ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ, ಬಿಡದಿ ತೋಟದ ಮನೆಯಲ್ಲಿದ್ದ ಕುಮಾರಸ್ವಾಮಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಧಾವಿಸಿದ್ದು, ಪುನೀತ್ ಆರೋಗ್ಯ ವಿಚಾರಿಸಿದ್ದಾರೆ.
ಇನ್ನೊಂದೆದೆ ಸಚಿವ ಆರ್.ಅಶೋಕ್, ಭೈರತಿ ಬಸವರಾಜ್, ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ರಾಜಕೀಯ ಗಣ್ಯರು ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ. ಇನ್ನೊಂದೆಡೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ದಂಡೆ ವಿಕ್ರಂ ಆಸ್ಪತ್ರೆಯತ್ತ ಹರಿದುಬರುತ್ತಿದ್ದು, ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.