ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಹಾಗೂ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನಡುವಿನ ವಾಕ್ಸಮರ ಮುಂದುವರೆದಿದ್ದು, ಡ್ರಗ್ಸ್ ಪತ್ತೆ ಆರೋಪಕ್ಕೆ ಸಂಬಂಧಿಸಿದಂತೆ ದೇವೇಂದ್ರ ಫಡ್ನವಿಸ್ ಕ್ಷಮೆ ಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನವಾಬ್ ಮಲ್ಲಿಕ್ ಎಚ್ಚರಿಕೆ ನೀಡಿದ್ದಾರೆ.
ನವಾಬ್ ಮಲ್ಲಿಕ್ ವಿರುದ್ಧ ವಾಗ್ದಾಳಿ ನಡೆಸಿದ್ದ ಫಡ್ನವಿಸ್, ಮಲ್ಲಿಕ್ ಮನೆಯಲ್ಲಿ ಡ್ರಗ್ಸ್ ಪತ್ತೆಯಾಗಿತ್ತು. ಯಾರ ಮನೆಯಲ್ಲಿ ಡ್ರಗ್ಸ್ ಪತ್ತೆಯಾಗಿತ್ತೋ ಅಂತವರ ಪಕ್ಷದ ಸ್ಥಿತಿ ಇಂದು ಶೋಚನೀಯವಾಗಿದೆ ಎಂದು ಹೇಳಿದ್ದರು.
ಫಡ್ನವಿಸ್ ಆರೋಪದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ನವಾಬ್ ಮಲ್ಲಿಕ್, ಫಡ್ನವಿಸ್ ಬಹಿರಂಗವಾಗಿ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.