
ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವೆಲ್ಡಿಂಗ್ ಕೆಲಸ ಮಾಡುತ್ತಿದ್ದ 23 ವರ್ಷದ ಸಫೀರ್ ಅಹ್ಮದ್ ಮೃತ ದುರ್ದೈವಿಯಾಗಿದ್ದು, ಈತನನ್ನು ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಸೈಯದ್ ಎಂಬಾತ ಕೊಲೆ ಮಾಡಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಠಾಣೆ ಪೊಲೀಸರು ಆರೋಪಿ ಸೈಯದ್ ನನ್ನು ಬಂಧಿಸಿದ್ದಾರೆ.