alex Certify ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳಿಂದಲೇ ಹೈಸ್ಕೂಲ್ ವಿದ್ಯಾರ್ಥಿ ಹತ್ಯೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳಿಂದಲೇ ಹೈಸ್ಕೂಲ್ ವಿದ್ಯಾರ್ಥಿ ಹತ್ಯೆ…!

ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಪ್ರಜ್ವಲ್ ಶಿವಾನಂದ ಕರೆಗಾರ ಎಂಬ ಹೈಸ್ಕೂಲ್ ವಿದ್ಯಾರ್ಥಿ ಹತ್ಯೆಯಾಗಿದ್ದು, ಇದೀಗ 19 ವರ್ಷದ ಲಕ್ಷ್ಮಣ ಎಲ್ಲಪ್ಪ ಹೊಸಮನಿ ಹಾಗೂ ಇಬ್ಬರು ಅಪ್ರಾಪ್ತ ಬಾಲಕರು ಬಂಧನಕ್ಕೊಳಗಾಗಿದ್ದಾರೆ.

ಅಕ್ಟೋಬರ್ 19ರಂದು ಶಾಲೆಗೆ ತೆರಳಿದ್ದ ಪ್ರಜ್ವಲ್ ಸಂಜೆಯಾದರೂ ಮನೆಗೆ ಬಾರದ ಕಾರಣ ಆತನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಾರನೇ ದಿನ ವಿದ್ಯಾರ್ಥಿ ಶವ ಮುಚ್ಚಂಡಿ ಗ್ರಾಮದ ಹೊರ ವಲಯದಲ್ಲಿ ಪತ್ತೆಯಾಗಿತ್ತು.

ಬಾಲಕನ ತಲೆ ಮೇಲೆ ಕಲ್ಲು ಎತ್ತಿ ಹಾಕಲಾಗಿತ್ತಲ್ಲದೆ ಮನ ಬಂದಂತೆ ಚಾಕುವಿನಿಂದ ಇರಿಯಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನುಮಾನದ ಮೇರೆಗೆ ಸಹಪಾಠಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕ್ಷುಲ್ಲಕ ಕಾರಣಕ್ಕೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...