ಕ್ಷುಲ್ಲಕ ವಿಚಾರಕ್ಕೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ ಪರಿಣಾಮ ನಾಲ್ವರು ಹುಡುಗರು ಹದಿನಾರು ವರ್ಷದ ಬಾಲಕನನ್ನು ಹೊಡೆದು ಕೊಲೆ ಮಾಡಿದ ಘಟನೆಯು ರಾಯ್ಪುರದ ಶಾಲೆಯೊಂದರಲ್ಲಿ ಸಂಭವಿಸಿದೆ.
ಛತ್ತೀಸಗಢದ ರಾಜಧಾನಿ ಭಾನ್ಪುರಿ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತ ಮೋಹನ್ ಸಿಂಗ್ ರಜಪೂತ್ 10ನೇ ತರಗತಿ ಪರೀಕ್ಷೆಗೆ ಹಾಜರಾಗಲು ಶಾಲೆಗೆ ಆಗಮಿಸಿದ್ದ. ವಿದ್ಯಾರ್ಥಿಗಳ ಅಂಕವನ್ನು ಸುಧಾರಿಸಲು ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ವೇಳೆ ಈತ 11ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದ ಎಂದು ಖಮ್ತರೈ ಪೊಲೀಸ್ ಠಾಣೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಗಳವು ವಿಕೋಪಕ್ಕೆ ತಿರುಗಿ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ರಜಪೂತ್ಗೆ ತೀವ್ರವಾಗಿ ಥಳಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ರಜಪೂತ್ನನ್ನು ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.