ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಈ ಶಾಲೆಗಳ ನವೀಕರಣದ ಅವಧಿಯನ್ನು ವಿಸ್ತರಿಸಲಾಗಿದೆ.
ಜನವರಿ 25 ರವರೆಗೆ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ನವೀಕರಣ ಅವಧಿಯನ್ನು ವಿಸ್ತರಿಸಲಾಗಿದ್ದು, ಅಷ್ಟರೊಳಗಾಗಿ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಫೆಬ್ರವರಿ 9 ರೊಳಗೆ ಶಿಕ್ಷಣ ಇಲಾಖೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದು, ಈಗ ನೀಡಿರುವ ಅವಧಿಯೊಳಗೆ ವಿಸ್ತರಿಸಿಕೊಳ್ಳದಿದ್ದರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ವಿಶಾಲ್ ಎಚ್ಚರಿಸಿದ್ದಾರೆ.