ಬೆಂಗಳೂರು ನಗರದಲ್ಲಿ ಸೋಂಕು ಹೆಚ್ಚಾಗುತ್ತಿರುವ ಕಾರಣ, ಆಸ್ಪತ್ರೆಗಳಿಗೆ ದಾಖಲಾಗುವ ಕೊರೋನಾ ಸೋಂಕಿತರ ಪ್ರಮಾಣವು ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕೊರೋನಾ ಎರಡನೇ ಅಲೆಯಲ್ಲಿ ವಾರಗಟ್ಟಲೆ ಆಸ್ಪತ್ರೆಯಲ್ಲಿ ಉಳಿಸಿಕೊಂಡು, ಲಕ್ಷಗಟ್ಟಲೆ ಬಿಲ್ ಮಾಡಿ ಸೋಂಕಿತರ ಜೇಬಿಗೆ ಕತ್ತರಿ ಹಾಕಿದ್ದ ಹಲವು ಆಸ್ಪತ್ರೆಗಳ ಬಣ್ಣ ಬಯಲಾಗಿತ್ತು. ಇದನ್ನ ಗಮನದಲ್ಲಿಟ್ಟುಕೊಂಡು, ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಂದ ಹೆಚ್ಚು ಹಣ ವಸೂಲಿ ಮಾಡದಹಾಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಆರೋಗ್ಯ ಇಲಾಖೆ ಹೊರಡಿಸಿರುವ ಹೊಸ ಆದೇಶದಲ್ಲಿ ಏನಿದೆ..?
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೊರೋನಾ ಸ್ಪೋಟ, 9 ಪ್ರಯಾಣಿಕರಿಗೆ ಸೋಂಕು ದೃಢ
ಪಾಸಿಟಿವ್ ಬಂದು 10 ದಿನಕ್ಕೆ ಸೋಂಕಿನ ಗುಣಲಕ್ಷಣ ಇಲ್ಲದಿದ್ದರೆ ಸೋಂಕಿತರನ್ನು ಡಿಸ್ಚಾರ್ಜ್ ಮಾಡಬೇಕು. ಸೋಂಕಿತರಿಗೆ ರೋಗದ ಲಕ್ಷಣ ಕಡಿಮೆ ಆದ್ಮೇಲೆ ಡಿಸ್ಚಾರ್ಜ್ ಮಾಡಿ, ಮನೆಯಲ್ಲಿ ಹೋಂ ಕ್ವಾರಂಟೈನ್ ಗೆ ಒಳಗಾಗಲು ಸೂಚಿಸಬೇಕು. ಗುಣ ಲಕ್ಷಣ ಇಲ್ಲದ ಸೋಂಕಿತರನ್ನು ಹತ್ತಕ್ಕಿಂತ ಅಧಿಕ ದಿನ ಆಸ್ಪತ್ರೆಯಲ್ಲಿ ಉಳಿಸಿಕೊಳ್ಳಬಾರದು, ಎಂದು ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ಡಿ ರಂದೀಪ್ ಮಹತ್ವದ ಆದೇಶ ಹೊರಡಿಸಿದ್ದಾರೆ.