ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ನವೀಕರಣ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಹೊಸ ಮಾನ್ಯತೆ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರ ವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಮಾನ್ಯತೆ ಅಥವಾ ನವೀಕರಣಕ್ಕಾಗಿ ಸಲ್ಲಿಸಿದ ಅರ್ಜಿಗಳು ತಿರಸ್ಕೃತವಾಗಿರುವ ಅಥವಾ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ಲೈನ್ ಮೂಲಕ ಸೆಪ್ಟೆಂಬರ್ 29 ರಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಅಲ್ಲದೆ ನಿಗದಿತ ದಿನಾಂಕದೊಳಗೆ ಸುರಕ್ಷತಾ ಪ್ರಮಾಣ ಪತ್ರ ಸಲ್ಲಿಸಲು ಸಾಧ್ಯವಾಗದೇ ಇರುವ ಶಾಲೆಗಳು ಸಹ ಅಫಿಡವಿಟ್ ಸಲ್ಲಿಕೆ ಮಾಡಬಹುದಾಗಿದೆ. ಹೀಗೆ ಸಲ್ಲಿಕೆಯಾದ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರು ನವೆಂಬರ್ 25ರೊಳಗೆ ಹಂತಹಂತವಾಗಿ ಇತ್ಯರ್ಥ ಪಡಿಸಬೇಕಾಗಿದ್ದು, ಇಲ್ಲದಿದ್ದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.