alex Certify ಖ್ಯಾತ ನಿರ್ಮಾಪಕನ ಜೊತೆ ಕಿರುತೆರೆ ನಟಿ ಮಹಾಲಕ್ಷ್ಮಿ ಮದುವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ನಿರ್ಮಾಪಕನ ಜೊತೆ ಕಿರುತೆರೆ ನಟಿ ಮಹಾಲಕ್ಷ್ಮಿ ಮದುವೆ

ತಮಿಳು ಚಿತ್ರರಂಗದ ನಟಿ, ನಿರೂಪಕಿ ಮಹಾಲಕ್ಷ್ಮಿ ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಅವರ ಜೊತೆ ಮದುವೆಯಾಗಿದ್ದು, ಇವರಿಬ್ಬರ ಮದುವೆ ಫೋಟೋಗಳು ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.

ತಿರುಪತಿಯಲ್ಲಿ ಇವರಿಬ್ಬರು ಸಪ್ತಪದಿ ತುಳಿದಿದ್ದು ಈ ಸಂದರ್ಭದಲ್ಲಿ, ಆತ್ಮೀಯರು ಉಪಸ್ಥಿತರಿದ್ದರು. ಇವರಿಬ್ಬರಿಗೂ ಇದು ಎರಡನೇ ಮದುವೆ ಎಂಬುದು ವಿಶೇಷ.

ಮಹಾಲಕ್ಷ್ಮಿ, ರವೀಂದರ್ ಚಂದ್ರಶೇಖರ್ ನಿರ್ಮಿಸಿದ್ದ ಸಿನಿಮಾ ಒಂದರಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಮೊಳಕೆಯೊಡೆದಿತ್ತು.

ಇದೀಗ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಮ್ಮ ಮದುವೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಹಾಲಕ್ಷ್ಮಿ, ನಿಮ್ಮನ್ನು ಪಡೆಯಲು ನಾನು ತುಂಬಾ ಅದೃಷ್ಟ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...