ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ಕಲಾವಿದ ದಿವಂಗತ ನರಸಿಂಹರಾಜು ಅವರ ಸ್ಮರಣಾರ್ಥ ಅವರ ಹುಟ್ಟೂರಾದ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಭವ್ಯವಾದ ರಂಗಮಂದಿರವನ್ನು ನಿರ್ಮಾಣ ಮಾಡಲಾಗಿದ್ದು, ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಲೋಕಾರ್ಪಣೆ ಮಾಡಿದ್ದಾರೆ.
ತಿಪಟೂರಿನ ಕೆ.ಆರ್. ಬಡಾವಣೆಯಲ್ಲಿ ಸುಮಾರು ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವನವನ್ನು ನಿರ್ಮಿಸಲಾಗಿದ್ದು, ಹತ್ತು ವರ್ಷದ ಹಿಂದೆ ಯಡಿಯೂರಪ್ಪನವರು ಒಂದೂವರೆ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವ ಮೂಲಕ ಈ ರಂಗ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದರು.
ನಾಟಕಗಳ ಅಭ್ಯಾಸಕ್ಕಾಗಿ ಈ ರಂಗಮಂದಿರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪರ ಊರುಗಳಿಂದ ಬರುವ ಕಲಾವಿದರು ಉಳಿದುಕೊಳ್ಳಲು ಕೊಠಡಿಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ಕೆಳ ಮಹಡಿಯಲ್ಲಿ ಆರ್ಟ್ ಗ್ಯಾಲರಿಗೆ ಅವಕಾಶ ನೀಡಲಾಗಿದ್ದು, ಕಲಾ ಪ್ರದರ್ಶನಗಳನ್ನು ಏರ್ಪಡಿಸಲು ಅನುಕೂಲಕರವಾಗಿದೆ.