alex Certify ಗಂಡ – ಹೆಂಡಿರ ಟಿಕೆಟ್ ಜಗಳದಲ್ಲಿ ಪೇಚಿಗೆ ಸಿಲುಕಿದ ಬಿಜೆಪಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡ – ಹೆಂಡಿರ ಟಿಕೆಟ್ ಜಗಳದಲ್ಲಿ ಪೇಚಿಗೆ ಸಿಲುಕಿದ ಬಿಜೆಪಿ…!

ಚುನಾವಣೆ ಎಂದರೆ ಪತಿಯು ತನ್ನ ಪತ್ನಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುವುದು ಹಾಗೂ ಪತ್ನಿ ತನ್ನ ಗಂಡನಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುವುದು ಕಾಮನ್. ಈ ರೀತಿಯ ಪ್ರಯತ್ನಗಳನ್ನು ಎಲ್ಲರೂ ಕೇಳಿಯೇ ಇರುತ್ತಾರೆ. ಆದರೆ, ಇಲ್ಲಿ ಒಂದೇ ಕ್ಷೇತ್ರದ ಟಿಕೆಟ್ ಗೆ ಇಬ್ಬರೂ ಕಿತ್ತಾಡುತ್ತಿರುವುದು ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದಲ್ಲಿಯೇ ಈ ಘಟನೆ ಬೆಳಕಿಗೆ ಬಂದಿದ್ದು, ಈಗಾಗಲೇ ಅಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಬಿಜೆಪಿ ಪಾಳಯದಲ್ಲಿ ಇಂತಹ ಅಪರೂಪದ ಪೈಪೋಟಿ ಒಂದು ನಡೆಯುತ್ತಿದೆ.

ಲಖನೌದ ಸರೋಜಿನಗರ ವಿಧಾನಸಭಾ ಕ್ಷೇತ್ರಕ್ಕಾಗಿಯೇ ಪತಿ ದಯಾ ಶಂಕರ್ ಸಿಂಗ್ ಹಾಗೂ ಪತ್ನಿ ಸ್ವಾತಿ ಸಿಂಗ್ ನಡುವೆ ಪೈಪೋಟಿ ನಡೆದಿದೆ.

ಈಗಾಗಲೇ ಈ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಪತ್ನಿ ಸ್ವಾತಿ ಸಿಂಗ್, ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಇವರ ಪತಿ ಕೂಡ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರು. ಅವರು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ.

ಪತ್ನಿ ಗೆದ್ದು ಸಚಿವರಾಗುತ್ತಿದ್ದಂತೆ ಪತಿಯ ಇಮೇಜ್ ಕ್ಷೇತ್ರದಲ್ಲಿ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ ಬಾರಿ ನನಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇನ್ನೊಂದೆಡೆ ಈಗಾಗಲೇ ಶಾಸಕರಾಗಿ ಹಾಗೂ ಸಚಿವರಾಗಿ ಅಧಿಕಾರ ಅನುಭವಿಸಿದ ಪತ್ನಿ ಕೂಡ ನನಗೆ ಈ ಕ್ಷೇತ್ರ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. ಗಂಡ- ಹೆಂಡಿರ ಈ ಟಿಕೆಟ್ ಜಗಳದಲ್ಲಿ ಈಗ ಬಿಜೆಪಿ ಪೇಚಿಗೆ ಸಿಲುಕಿದೆ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲ ಹಿರಿಯ ನಾಯಕರಲ್ಲಿ ಉಂಟಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...