alex Certify ಗಣೇಶೋತ್ಸವ ಕಾರ್ಯಕ್ರಮದಲ್ಲಿ ಕುಣಿಯುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶೋತ್ಸವ ಕಾರ್ಯಕ್ರಮದಲ್ಲಿ ಕುಣಿಯುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ

ಜಮ್ಮುಕಾಶ್ಮೀರ: ಮನುಷ್ಯನಿಗೆ ಸಾವು ಅನ್ನೋದು ಹೇಗೆ ಯಾವಾಗ ಬರುತ್ತೋ ಗೊತ್ತೇ ಆಗಲ್ಲ. ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್, ಕಾರ್ಡಿಯಾಕ್ ಅರೆಸ್ಟ್ ನಿಂದ ಸಾವನ್ನಪ್ಪುತ್ತಿರುವ ಘಟನೆಗಳು ಸಾಕಷ್ಟು ಆಗ್ತಾ ಇವೆ. ಇದೀಗ ವ್ಯಕ್ತಿಯೊಬ್ಬರು ಇದೇ ರೀತಿ ವೇದಿಕೆ ಮೇಲೆ ಕುಣಿಯುತ್ತಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೌದು, ಜಮ್ಮು ಕಾಶ್ಮೀರದ ಬಿಷ್ನಾಹ್ ಪ್ರದೇಶದಲ್ಲಿನ ಕೋಥೇ ಗ್ರಾಮದಲ್ಲಿ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಲಾವಿದರೊಬ್ಬರು ನೃತ್ಯ ಮಾಡುವಾಗಲೇ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಯೋಗೇಶ್ ಗುಪ್ತಾ ಸಾವನ್ನಪ್ಪಿದ ಕಲಾವಿದ.

ಇನ್ನು ಯೋಗೇಶ್ ಅವರು ಡಾನ್ಸ್ ಮಾಡುತ್ತಾ ಕುಸಿದು ಬಿದ್ದಿದ್ದಾರೆ. ನೃತ್ಯದ ಭಾಗವಾಗಿ ವೇದಿಕೆ ಮೇಲೆ ಹಾಗೆ ಬಿದ್ದಿದ್ದಾರೆ ಅಂತ ತಿಳಿದ ಪ್ರೇಕ್ಷಕರು ಕೂಡ ತಿಳಿದುಕೊಂಡು ಚಪ್ಪಾಳೆ ತಟ್ಟಿದ್ದಾರೆ. ಆದರೆ ಬಿದ್ದ ಕಲಾವಿದ ಎಷ್ಟು ಹೊತ್ತಾದರೂ ಏಳದೇ ಇದ್ದಾಗ ಅವರು ಪ್ರಜ್ಞೆ ತಪ್ಪಿ ಬಿದ್ದಿರುವುದು ಗೊತ್ತಾಗಿದೆ. ನಂತರ ಸಹ ಕಲಾವಿದರೊಬ್ಬರು ಬಂದು ನೋಡಿ ಏನೋ ಆಗಿದೆ ಅಂತ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಪ್ರಾಣ ಪಕ್ಷಿ ಹಾರಿ ಹೋಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...